ಮುಂಡಗೋಡ : ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಜೋಡಣೆಗೆ ರೈತರು, ಕಾರ್ಮಿಕರಿಗೆ ಆಗುತ್ತಿದ್ದ ಸಮಸ್ಯೆಯನ್ನು ಅರಿತು ಪಾಳಾ ಗ್ರಾಮದ ನೆಮ್ಮದಿ ಕೇಂದ್ರದಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ಪುನರ್ ಆರಂಭಿಸಲಾಗಿದೆ.
ಆಧಾರ್ ಕಾರ್ಡಗೆ ಮೊಬೈಲ್ ಸಂಖ್ಯೆ ಜೋಡಣೆಗೆ ತಾಲೂಕಿನ ಜನರ ಪರದಾಡುತ್ತಿರುವ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ತಹಶೀಲದಾರ ಶ್ರೀಧರ ಮುಂದಲಮನಿ ಅವರಿಗೆ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ತಹಶೀಲದಾರ ಶ್ರೀಧರ ಮುಂದಲಮನಿ ಅವರು ಪಾಳಾ ನೆಮ್ಮದಿ ಕೇಂದ್ರಕ್ಕೆ ಭೇಟಿ ನೀಡಿ, ಆಧಾರ್ ತಿದ್ದುಪಡಿ ಕೆಂದ್ರದಲ್ಲಿದ್ದ ತಾಂತ್ರಿಕ ಸಮಸ್ಯೆಗಳನ್ನು ಸಂಬಂಧಿಸಿದವರೊಂದಿಗೆ ಚರ್ಚಿಸಿ ಪರಿಹರಿಸಿದರು.