
ಬೆಂಗಳೂರು: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರದ ಇದೀಗ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ಈ ಮೂಲಕ ವಿಪಕ್ಷಗಳ ಒತ್ತಾಯದ ಬೆನ್ನಲ್ಲೇ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದನು. ಈ ಬಳಿಕ ಯುವಕನ ತಾಯಿಯ ಮನೆಗೆ ನುಗ್ಗಿದ್ದಂತ ಯುವತಿಯ ಕುಟುಂಬಸ್ಥರು ಮಹಿಳೆಯ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು.
ಈ ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದವು. ಈ ಹಿನ್ನಲೆಯಲ್ಲಿ ನಿನ್ನೆಯೇ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ.