ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣ​: ಪ್ರಿನ್ಸಿಪಾಲ್ ಸೇರಿ ಇಬ್ಬರ ಬಂಧನ

Spread the love

ಕೋಲಾರ:ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಬಳಿಯ ಶಾಲೆ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿ ಆಕ್ರೋಶ ವ್ಯಕ್ತವಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಿನ್ಸಿಪಾಲ್ ಸೇರಿ ಇಬ್ಬರನ್ನು ಮಾಸ್ತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಬಂಧಿತರು. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ ಪರಾರಿ ಆಗಿದ್ದು, ಹುಡುಕಾಟ ನಡೆಸುತ್ತಿದ್ದಾರೆ.

ಜಿಲ್ಲೆಯ ಮಾಲೂರು ತಾಲೂಕಿನ ಯಳವಳ್ಳಿ ಗ್ರಾಮದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ ನಡೆದಿದ್ದು, ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸಿಬ್ಬಂದಿಗಳು ಸ್ವಚ್ಛತೆ ಮಾಡಿಸಿರುವ ಅಮಾನವೀಯ ಘಟನೆ ನಡೆದಿದೆ.

ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ.ಮಕ್ಕಳಿಗೆ ಥಳಿಸುತ್ತಿರುವ ಹಾಗೂ ಶಿಕ್ಷೆ ಕೊಡುತ್ತಿರುವ ವಿಡಿಯೋ ಲೀಕ್ ಆಗಿದ್ದು,ರಾತ್ರಿ ಹೊತ್ತು ಬ್ಯಾಗ್ ಹೊರೆಸಿ ಮಕ್ಕಳಿಗೆ ಕಿರುಕುಳ ನೀಡಿದ್ದಾರೆ ಎಂದು ಮಕ್ಕಳ ಪೋಷಕರೂ ಆರೋಪಿಸಿದ್ದಾರೆ.

ಮಂಜುನಾಥ್ ಹಾಗೂ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಕಿರುಕುಳ ಆರೋಪ ಕೇಳಿಬಂದಿದೆ.ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.