ಮುಂದಿನ ‘ಶೈಕ್ಷಣಿಕ’ ವರ್ಷದಿಂದಲೇ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ ಮಾಹಿತಿ

Spread the love

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದಲೇ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಅಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಅವರು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ನಗರದ ಶಿಕ್ಷಕರ ಸದನದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ, ಪ್ರಶಸ್ತಿ ಪ್ರದಾನ ಹಾಗೂ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.