4 ಸಾರಿಗೆ ನಿಗಮಗಳಿಗೆ 542 ಕೋಟಿ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ

Spread the love

ಬೆಂಗಳೂರು:ಶಕ್ತಿ ಯೋಜನೆಯಿಂದ ನಷ್ಟಕ್ಕೊಳಗಾಗಿರುವ ಸಾರಿಗೆ ನಿಗಮಗಳಿಗೆ ಶಕ್ತಿ ತುಂಬುವ ಕೆಲಸ ಸರ್ಕಾರ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಇತ್ಯಾದಿ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ 541 ಕೋಟಿ ತೆರಿಗೆ ವಿನಾಯಿತಿ ಘೋಷಿಸಿದೆ.ಇದರಿಂದ ನಷ್ಟಕ್ಕೊಳಗಾಗಿರುವ ಸಾರಿಗೆ ಸಂಸ್ಥೆಗೆ ಸ್ವಲ್ಪ ರಿಲ್ಯಾಕ್ಸ್ ಮೂಡಿದೆ.

ನಾಲ್ಕು ನಿಗಮಗಳಿಗೆ ಒಂದು ವರ್ಷದಲ್ಲಿ ಒಟ್ಟು 541.87 ಕೋಟಿ ರೂನಷ್ಟು ಮೋಟಾರು ವಾಹನ ತೆರಿಗೆಯಲ್ಲಿ ವಿನಾಯಿತಿ ಸಿಗಲಿದ್ದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರಸ್ತಾಪಿಸಿರುವ ಈ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.