ಕಾರವಾರ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ವರ್ಗಾವಣೆಯಾಗಿದೆ.
ನೂತನ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ.
ವರ್ತಿಕಾ ಕಟಿಯಾರ್ ಅವರು ಇದೇ ಮೊದಲ ಬಾರಿಗೆ ಜಿಲ್ಲೆಗೆ ಬರುತ್ತಿರುವ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ.
ರಾಜ್ಯ ಅಪರಾಧ ವಿಭಾಗದಲ್ಲಿ ಕಾರ್ಯನಿರ್ವಸುತ್ತಿದ್ದ ವರ್ತಿಕಾ ಕಟಿಯಾರ ಅವರನ್ನು ಉತ್ತರಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ರಾಜ್ಯ ಸರಕಾರ ನೇಮಕ ಮಾಡಿದೆ. ಕಳೆದ ಎರಡು ವರ್ಷಗಳಿಂದ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದ ಶಿವಪ್ರಕಾಶ ದೇವರಾಜ ದಿಢೀರ್ ವರ್ಗಾವಣೆ ಎಲ್ಲರನ್ನೂ ಚಕಿತಗೊಳಿಸಿದೆ.