ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿಕೆ : ಆಕಾಂಕ್ಷಿಗಳಿಗೆ ಬಿಗ್ ಶಾಕ್

Spread the love

ಬೆಂಗಳೂರು : ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿಗಳಿಗೆ ರಾಜ್ಯ ಸರ್ಕಾರದಿಂದ ಮೀಸಲಾತಿಯನ್ನು ಪ್ರಕಟಗೊಳಿಸಲಾಗಿದೆ. ಇನ್ನೇನು ಚುನಾವಣೆ ಕೂಡ ಸದ್ಯದಲ್ಲೇ ಘೋಷಣೆ ಕೂಡ ಆಗಲಿದೆ ಎಂದೇ ನಿರೀಕ್ಷಿಸಲಾಗಿತ್ತು. ಆದ್ರೇ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವಂತ ನಿರ್ಣಯವನ್ನು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಈ ಮೂಲಕ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ನೀಡಿದೆ.

ಈ ಕುರಿತಂತೆ ಇಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ 2021ರ ಡಿಸೆಂಬರ್ ವರೆಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದಿರಲು ನಿರ್ಧರಿಸಿದೆ.