S.S.L.C. ಪರೀಕ್ಷೆಗೆ ಸಕಲ ಸಿದ್ದತೆ

Spread the love
ಶ್ರೀಧರ ಮುಂದಲಮನಿ, ತಹಶೀಲದಾರರು, ಮುಂಡಗೋಡ.

ಮುಂಡಗೋಡ : S.S.L.C. ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮುಂಡಗೋಡ ತಹಶೀಲದಾರ ಶ್ರೀಧರ ಮುಂದಲಮನಿ ತಿಳಿಸಿದ್ದಾರೆ.

1562 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ನೀಡಲು ಈಗಾಗಲೇ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಬಸ್ ಸೌಕರ್ಯಗಳಿಲ್ಲದಿದ್ದರೆ ಖಾಸಗಿ ಶಾಲಾ ವಾಹನ, ಇಲಾಖೆ ವಾಹನಗಳನ್ನು ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ವಿ.ವಿ.ನಡುವಿನಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಂಡಗೋಡ.

256 ಸಿಬ್ಬಂದಿಗಳನ್ನು ನೇಮಿಸಲಾಗಿದೆ…..

ಎಸ್.ಎಸ್.ಎಲ್.ಸಿ. ಪರೀಕ್ಷೆಗಾಗಿ ತಾಲೂಕಿನಲ್ಲಿ ಒಟ್ಟು 7 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ. 769 ವಿದ್ಯಾರ್ಥಿಗಳು ಮತ್ತು 793 ವಿದ್ಯಾರ್ಥಿನಿಯರು ಸೇರಿ ಒಟ್ಟು 1562 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗಲಿದ್ದಾರೆ. 7 ಅಧಿಕಾರಿಗಳನ್ನು ಜಾಗೃತಿದಳಕ್ಕೆ ಮತ್ತು ಪರೀಕ್ಷಾ ಕೇಂದ್ರಗಳಿಗೆ 256 ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ ತಿಳಿಸಿದ್ದಾರೆ.