
ಮುಂಡಗೋಡ : ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸುಮೋಟೋ ಕೇಸ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸಂಸದ ಅನಂತಕುಮಾರ್ ಹೆಗಡೆ ಮಾತನಾಡಿದ್ದರು.
ರಾತ್ರಿಯೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಶಾಂತಿ ಕದಡುವ ಪ್ರಕರಣವೆಂದು ದಾಖಲಿಸಿಕೊಳ್ಳಲಾಗಿದೆ.
ಕೆಲವು ದಿನಗಳ ಹಿಂದೆ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಎಂ ಸಿದ್ದರಾಮಯ್ಯನವರನ್ನು ಏಕವಚನದಲ್ಲಿ ನಿಂದಿಸಿದ ಬಗ್ಗೆ ಹೈಕೋರ್ಟ್ ಅನಂತಕುಮಾರ್ ಹೆಗಡೆಯವರನ್ನು ತರಾಟೆಗೆ ತೆಗೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಿ ಕುಳ್ಳ ಬಹುದು.
