ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ; ತನಿಖೆಗಾಗಿ ಮೂರು ವಿಶೇಷ ತಂಡ ರಚನೆ

Spread the love

ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ.

ಈ ಪ್ರಕರಣ ಸಂಬಂಧ ತನಿಖೆಗೆ ಮೂರು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿ ಶೇಖರ್ ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ಈ ರೀತಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಾಸೀರ್ ಹುಸೇನ್ ಜೊತೆ ಬಂದವರ ಪಟ್ಟಿ ಸಂಗ್ರಹಿಸಲಾಗಿದ್ದು, ಟೆಕ್ನಿಕಲ್ ಅನಾಲಿಸಿಸ್ ಹಾಗೂ ವಿಡಿಯೋಗಳನ್ನು ಪರಿಗಣಿಸುವ ಕಾರ್ಯ ಮಾಡಲಾಗುತ್ತಿದೆ.

ವಿಧಾನಸೌಧ ಠಾಣೆ ಪೊಲೀಸರು ಪಾಕಿಸ್ತಾನ ಪರ ಘೋಷಣೆ ಕೂಗಿದವರ ಹುಡುಕಾಟ ನಡೆಸಿದ್ದಾರೆ. ಘೋಷಣೆ ಕೂಗಿದ ವೇಳೆ ನಾಸೀರ್ ಹುಸೇನ್ ಬಳಿ ಇದ್ದ ವ್ಯಕ್ತಿಯನ್ನು ಇಂದು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ.