![](https://rajnewsline.com/wp-content/uploads/2021/07/H22-mundgod-0211.jpg)
ಮುಂಡಗೋಡ: ನಗರ ಮತ್ತು ತಾಲೂಕಿನಾದ್ಯಂತ ಎಲ್ಲಾ ಕಡೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಪಟ್ಟಣದ ಹೊರವಲಯದ ಯಲ್ಲಾಪುರ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ರಸ್ತೆಯ ಅಂಚಿನಲ್ಲಿನ ಚರಂಡಿಗಳಲ್ಲಿ ಸಮರ್ಪಕವಾಗಿ ನೀರು ಹರಿದು ಹೋಗದೆ ರಸ್ತೆಯ ಮೇಲೆ ನೀರು ನಿಲ್ಲುತ್ತಿದೆ. ಇದರಿಂದ ಬೈಕ್ ಹಾಗೂ ಕಾರುಗಳು ಬೇರೆ ಮಾರ್ಗವಾಗಿ ಸಂಚರಿಸುವ ಪರಿಸ್ಥಿತಿ ಬಂದಿದೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುವಂತೆ ಜನರು ಆಗ್ರಹಿಸಿದ್ದಾರೆ.