ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ವಿತರಿಸಿದ್ದಾರೆ.
ಉಡುಪಿ -ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಹಾಗೂ ಚಿತ್ರದುರ್ಗ ಅಭ್ಯರ್ಥಿ ಬಿ.ಎನ್.
ಚಂದ್ರಪ್ಪ ಮೊದಲಾದವರಿಗೆ ನಿನ್ನೆ ರಾತ್ರಿ ಬಿ ಫಾರಂ ವಿತರಿಸಲಾಗಿದೆ. ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿ ಶುಭ ಹಾರೈಸಿದ್ದಾರೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟಿಸಲಾಗುವುದು.
ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು, ಹಾಸನ, ಮಂಡ್ಯ, ಚಿತ್ರದುರ್ಗ, ಮೈಸೂರು -ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ.