ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ..!

Spread the love

ದಾಂಡೇಲಿ : ಬೆಳಗಾವಿಯಿಂದ ದಾಂಡೇಲಿಗೆ ಬರುತ್ತಿದ್ದ ಬೆಳಗಾವಿ ಮೂಲದ ಮೂವರು ಪ್ರಯಾಣಿಕರನ್ನೊಳಗೊಂಡ ಕಾರೊಂದು ತಾಲೂಕಿನ ನಾನಾಕೇಸರೋಡ ಎಂಬಲ್ಲಿ ಆಕಸ್ಮಿಕ ಅಗ್ನಿ ಅವಘಡಕ್ಕೊಳಗಾಗಿ ಸುಟ್ಟುಹೋದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ಕೂಡಲೇ ಕಾರಿನಿಂದ ಹೊರ ಬಂದಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.
ಬೆಳಗಾವಿಯಿಂದ ಬರುತ್ತಿದ್ದ ಕಾರು ನಾನಾಕೇಸರೋಡ‌ದ ಹತ್ತಿರ ಬರುತ್ತಿದ್ದಂತೆಯೇ ಕಾರಿನಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಹೊರಗೆ ಬಂದ ಕೆಲವೇ ಕ್ಷಣದೊಳಗೆ ಕಾರು ಸಂಪೂರ್ಣ ಸುಟ್ಟು ಹೋಗಿದೆ.