ಮುಂಡಗೋಡ : ಇಲ್ಲಿಯ ತಹಶೀಲದಾರ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ತಹಶೀಲದಾರ ಶಂಕರ ಗೌಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲರಾದ ಮಂಜುನಾಥ ಮರಿತಮ್ಮಣ್ಣನವರ್ ಉಪನ್ಯಾಸ ನೀಡಿದರು.
ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎಸ್.ಫಕ್ಕೀರಪ್ಪ, ಪ.ಪಂ.ಸದಸ್ಯ ಅಶೋಕ ಚಲವಾದಿ, ಕರ್ನಾಟಕ ರಾಜ್ಯ ಅನ್ನದಾತ ರೈತಸಂಘ ಮತ್ತು ಹಸಿರುಸೇನೆಯ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ ಮಾತನಾಡಿದರು.
ಇದೇ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉಪನ್ಯಾಸಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಇಂಜಿನೀಯರ್ ಪ್ರದೀಪ್ ಭಟ್, ಚಿಕ್ಕ ನೀರಾವರಿ ಇಲಾಖೆಯ ಧಪೇದಾರ, ಮುಖಂಡರಾದ ಎನ್.ಡಿ.ಕಿತ್ತೂರ, ಚಿದಾನಂದ ಹರಿಜನ, ಹನ್ಮಂತ ಭಜಂತ್ರಿ, ಶೀಲಾ ರಾಠೋಡ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ, ಸಂಸ್ಥೆಯ ಮುಖ್ಯಸ್ಥರು ಇದ್ದರು. ಶಿಕ್ಷಕ ಸುರೇಶ್ ಪೂಜಾರ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮೊದಲು ಗಾಂಧಿನಗರದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಡಾ.ಅಂಬೇಡ್ಕರ್ ಓಣಿ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.