ಬೆಂಗಳೂರು : ಜುಲೈ 28 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ನಿರ್ದೇಶಕ C.S. ಪಾಟೀಲ್ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಬೆಳಗಾವಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಈ 8 ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಎರೋದು ಒಳ್ಳೆಯದು. ಇನ್ನು ಜು.25, 26ರಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇನ್ನೂ 2 ದಿನ ಭಾರಿ ಮಳೆ ಸಾಧ್ಯತೆ ಇದೆ ಅಂತಾ ಇದೇ ವೇಳೆ C.S. ಪಾಟೀಲ್ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ ನಿನ್ನೆ ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಗೆ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅಂತಾ ತಿಳಿಸಿದೆ.
**************** ********************
ರಾಜ ನ್ಯೂಸ್ ಲೈನ್ ನಲ್ಲಿ ಸುದ್ಧಿ, ಜಾಹೀರಾತಿಗಾಗಿ ಸಂಪರ್ಕಿಸಿ ( ವಾಟ್ಸಾಪ್ ಮಾಡಿ) : 9880111140