Headlines

ಪ್ರವಾಹದ ಪರಿಸ್ಥಿತಿಯಲ್ಲಿ ಸಿ.ಎಂ. ಬದಲಾವಣೆ ಬೇಕಿರಲಿಲ್ಲ: ಕಾಗೋಡು ತಿಮ್ಮಪ್ಪ

Spread the love

ಸಾಗರ : ‘ರಾಜ್ಯದ ಹೆಚ್ಚಿನ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಇರುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿರುವ ಕ್ರಮ ಸರಿಯಲ್ಲ’ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಬದಲಾವಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ಆಡಳಿತದ ಮೇಲೆ ಹಿಡಿತ ಸಾಧಿಸಲು ಒಂದಷ್ಟು ಸಮಯ ಬೇಕಾಗುತ್ತದೆ. ಅಲ್ಲಿಯವರೆಗೆ ನೆರೆ ಸಂತ್ರಸ್ತರಿಗೆ ಪರಿಹಾರ ದೊರಕುವುದಿಲ್ಲ. ಈ ಕಾರಣಕ್ಕಾದರೂ ಒಂದಷ್ಟು ಕಾಲ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕಿತ್ತು’ ಎಂದರು.

‘ಬಿಜೆಪಿಯಲ್ಲಿ ನಾಯಕತ್ವದ ಕುರಿತು ಪರಸ್ಪರ ಒಡಕು ಇದೆ. ಒಮ್ಮತದ ಕೊರತೆಯಿಂದಾಗಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗಿದೆ. ಅವರ ಎರಡು ವರ್ಷದ ಆಡಳಿತದ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ರಾಜ್ಯದ ಅಭಿವೃದ್ಧಿ ಆಗಿಲ್ಲ. ಇವುಗಳೇನೆ ಇದ್ದರೂ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿರ್ಧಾರ ಸರಿಯಾದುದ್ದಲ್ಲ’ ಎಂದು ಹೇಳಿದರು.