ಇಂದು ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭ : ಭಾಗಿಯಾಗಲಿದ್ದಾರೆ ಈ ವಿಶ್ವ ನಾಯಕರು, ಇಲ್ಲಿದೆ ಪಟ್ಟಿ

Spread the love

ನವದೆಹಲಿ : ಇಂದು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವದ ಹಲವು ಗಣ್ಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
293ಸ್ಥಾನ ಗೆದ್ದಿರುವ ಬಿಜೆಪಿ ನೇತೃತ್ವದ ಎನ್‌ ಡಿಎ ಕೂಟದ ಕೇಂದ್ರ ಸರ್ಕಾರ ಇಂದಿನಿಂದ ಅಸ್ವಿತ್ವಕ್ಕೆ ಬರಲಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಮಂತ್ರಿ ಮಂಡಲದ ಸದಸ್ಯರು ಇಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವ ನಾಯಕರ ಪಟ್ಟಿ ಇಲ್ಲಿದೆ
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’, ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ, ಸೀಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫಿಫ್ ಮತ್ತು ಇತರ ನಾಯಕರು ಮತ್ತು ಉನ್ನತ ರಾಜತಾಂತ್ರಿಕರು ಇಂದಿನ ಪ್ರಧಾನಿ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.