ಪ್ರತಿ ಸೋಮವಾರ ಸರ್ಕಾರಿ ನೌಕರರಿಗೆ ಹಾಜರಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಆದೇಶ

Spread the love

ಬೆಂಗಳೂರು: ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರ ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಚೇರಿಗಳಿಗೆ ಆಗಮಿಸುವ ಜನರಿಗೆ ಸರಕಾರಿ ಸೇವೆ ಒದಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳ ಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. 
ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಸುಧಾರಣಾ ಇಲಾಖೆಯ ಆಡಳಿತ ಸರಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲ ಸರಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.