‘ನಟ ದರ್ಶನ್’ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯೋ?: ನಟಿ ರಮ್ಯಾ

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಟ್ವಿಟ್ ನಲ್ಲಿ ರಿಯಾಕ್ಟ್ ಮಾಡಿದ್ದು, ದರ್ಶನ್ ಅವರಿಗೆ ಮರಣದಂಡನೆಯೋ ಅಥವಾ ಜೀವಾವಧಿ ಶಿಕ್ಷೆಯೋ ಅಂತ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಇಂದು ನಟಿ ರಮ್ಯಾ ಅವರು ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವಂತವರು ಎಕ್ಸ್ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್ ನಲ್ಲಿ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ನಟ ದರ್ಶನ್ ವಿರುದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೇಸ್ ದಾಖಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ನಟ ದರ್ಶನ್ ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ವಿಧಿಸಬಹುದೇನೋ ಅಂತ ತಿಳಿಸಿದ್ದಾರೆ.
ಬೇರೆ ಯಾವುದೇ ಫಲಿತಾಂಶವು ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವ ಪ್ರಕರಣವಾಗಿರುತ್ತದೆ. ಬಲಿಪಶುವಿಗೆ ಅರ್ಹವಾದ ನ್ಯಾಯ ಸಿಗುತ್ತದೆ ಎಂದು ಭಾವಿಸುತ್ತೇನೆ ಎಂಬುದಾಗಿ ಹೇಳಲಾದಂತ ಪೋಸ್ಟ್ ನಟಿ ರಮ್ಯಾ ರೀ ಪೋಸ್ಟ್ ಮಾಡಿದ್ದಾರೆ.