ಅತಿವೃಷ್ಟಿಯಿಂದ ಹಾನಿಯಾದ ಕಳಚೆ ಭಾಗಕ್ಕೆ ಸಿಎಂ ಭೇಟಿ

Spread the love

ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು. ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು ಹಾಗೂ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.

ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕರೆದುಕೊಂಡ ಬಂದಿರುವ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಕಾರ್ಯವೈಖರಿಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಶಾಸಕರು ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಪದಾಧಿಕಾರಿಗಳು ಕಾರ್ಯಕರ್ತರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.