ಬೆಂಗಳೂರು : ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಯೋಗಾಸನ ಮಾಡಿದ್ದಾರೆ. ಪದ್ಮನಾಭ ನಗರದ ನಿವಾಸದಲ್ಲಿ ಯೋಗ ಅಭ್ಯಾಸ ಮಾಡಿದ್ದು, ಯಾರ ಸಹಾಯವೂ ಇಲ್ಲದೇ ಈ ವಯಸ್ಸಿನಲ್ಲಿಯೂ ಯೋಗಾಸನ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ತಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಭಾರತೀಯ ಯೋಗಾಭ್ಯಾಸವು ದೈಹಿಕ ಆರೋಗ್ಯ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗಿದೆ. ಇದರಿಂದ ನಾನು 91 ವರ್ಷಗಳ ಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.