ʻರಾಜಕೀಯ ನಿವೃತ್ತಿʼ ಬಗ್ಗೆ ಸಚಿವ ಕೆ.ಎನ್.‌ ರಾಜಣ್ಣ ಮಹತ್ವದ ಹೇಳಿಕೆ

Spread the love

ಬಾಗಲಕೋಟೆ : ರಾಜಕೀಯ ನಿವೃತ್ತಿ ಬಗ್ಗೆ ಸಚಿವ ಕೆ.ಎನ್.‌ ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದು, ಇನ್ಮುಂದೆ ನಾನು ಯಾವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ನಾನು ಮುಂದಿನ ದಿನಗಳಲ್ಲಿ ಯಾವ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎನ್ನುವ ಮೂಲಕ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ತಾವು ಡಿಸಿಎಂ ಹುದ್ದೆಯ ಆಕಾಂಕ್ಷಿಯಲ್ಲ ಎನ್ನುವ ಮೂಲಕ ಡಿಸಿಎಂ ಹುದ್ದೆ ಕುರಿತು ಸ್ಪಷ್ಟನೆ ನೀಡಿದ್ದಾರೆ.