ಯುವತಿಗೆ 18ಲಕ್ಷರೂ. ವಂಚಿಸಿದ ಪೊಲೀಸಪ್ಪ..!

Spread the love

ಮುಂಡಗೋಡ : ಮನೆ ಕಟ್ಟಲು ಹಣದ ಅವಶ್ಯಕತೆ ಇದೆ ಎಂದು ಯುವತಿಯೊಬ್ಬಳಿಗೆ ನಂಬಿಸಿ, ಮೋಸದಿಂದ 18ಲಕ್ಷ ರೂಪಾಯಿಯನ್ನು ಪಡೆದುಕೊಂಡು ವಂಚಿಸಿದ ಆರೋಪದ ಮೇಲೆ ಮುಂಡಗೋಡ ಠಾಣೆಯ ಕಾನ್ಸ್ಟೇಬಲ್ ಗಿರೀಶ ಎಸ್.ಎಮ್ ಎಂಬಾತನ ಮೇಲೆ ರವಿವಾರ ರಾತ್ರಿ ಪ್ರಕರಣ ದಾಖಲಾಗಿದೆ.

ಮುಂಡಗೋಡ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಗಿರೀಶ ಎಸ್.ಎಮ್ ಎಂಬಾತನು ಮನೆ ಕಟ್ಟಲು ಹಣದ ಅವಶ್ಯಕತೆಯಿದೆ ಎಂದು ಹಾಸನ ಮೂಲದ ಯುವತಿಯನ್ನು ನಂಬಿಸಿ 27-4-2018ರಿಂದ 23-8-2023ರ ವರೆಗೆ ಆನ್ ಲೈನ್ ಮೂಲಕ ಹಾಗೂ 28-04-2021ರಂದು ಮುಂಡಗೋಡದ ಕೆಎಚ್.ಬಿ ಕಾಲೋನಿಯ ಮನೆಯಲ್ಲಿ 2.50ಲಕ್ಷ ರೂಪಾಯಿ ಸೇರಿದಂತೆ ಒಟ್ಟು 18ಲಕ್ಷ ರೂಪಾಯಿಯನ್ನು ತೆಗೆದುಕೊಂಡು ಯುವತಿಗೆ ಚೆಕ್ ಗಳನ್ನು ನೀಡಿ, ತೆಗೆದುಕೊಂಡ ಹಣವನ್ನು ಮರಳಿ ನೀಡದೇ ನಂಬಿಸಿ ಮೋಸ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.