
ನವದೆಹಲಿ : ಇಂಗ್ಲೆಂಡ್ ವಿರುದ್ಧ ಗೆದ್ದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಇದನ್ನು ಕಂಡ ವಿರಾಟ್ ಕೊಹ್ಲಿ ಅವರ ಬಳಿ ಬಂದು ನಗಿಸಿದ್ದಾರೆ.
2022 ರ ಟಿ20 ವಿಶ್ವಕಪ್ ಸೆಮಿಸ್ ಸೋಲಿನ ಸೇಡು ತೀರಿಸಿಕೊಂಡಿದೆ ಟೀಂ ಇಂಡಿಯಾ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಟೀಂ ಇಂಡಿಯಾ ಬೌಲರ್ಸ್‌ಗಳ ಅದ್ಭುತ ಬೌಲಿಂಗ್‌ನಿಂದ ಗೆದ್ದು ಬೀಗಿದೆ.
2022 ರ ಸೆಮಿಸ್ ಸೋಲಿನ ಸೇಡು ತೀರಿಸಿಕೊಂಡಿದೆ ಭಾರತ. ಶನಿವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 171 ರನ್‌ಗಳಿಸಿತ್ತು.
172 ರನ್‌ಗಳ ಗುರಿ ಬೆನ್ನತ್ತಿ ಬ್ಯಾಟಿಂಗ್‌ಗೆ ಬಂದ ಇಂಗ್ಲೆಂಡ್ ಬ್ಯಾಟರ್ಸ್‌ಗೆ ಟೀಂ ಇಂಡಿಯಾ ಬೌಲರ್ಸ್ ಚಳ್ಳೆ ಹಣ್ಣು ತಿನ್ನಿಸಿದ್ರು. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಿದೆ. ಇಂಗ್ಲೆಂಡ್ 20 ಓವರ್‌ಗಳಲ್ಲಿ 10 ವಿಕೆಟ್ ಕಳೆದುಕೊಂಡು 103 ರನ್‌ಗಳಿಸಿ ಟೀಂ ಇಂಡಿಯಾ ಎದುರು ಮಂಡಿಯೂರಿತು.
ಇಂಗ್ಲೆಂಡ್ ವಿರುದ್ಧ ಗೆದ್ದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಇದನ್ನು ಕಂಡ ವಿರಾಟ್ ಕೊಹ್ಲಿ ಅವರ ಬಳಿ ಬಂದು ನಗಿಸಿದ್ದಾರೆ.