ರಾಜ್ಯದ ನೆಲ, ಜಲ, ಭಾಷೆಯಲ್ಲಿ ರಾಜಕೀಯ ಮಾಡಬಾರದು : ಸಿಎಂ ಸಿದ್ದರಾಮಯ್ಯ ಹೇಳಿಕೆ

Spread the love

ನವದೆಹಲಿ : ರಾಜ್ಯಕ್ಕೆ ಸಿಗಬೇಕಾದ ಅನುದಾನದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ 3 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ರಾಜ್ಯದಿಂದ ಆಯ್ಕೆಯಾದ ಸಂಸದರ ಜೊತೆ ಚರ್ಚಿಸಿದ್ದೇವೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ನಾವು ಚರ್ಚೆ ಮಾಡಿದ್ದೇವೆ. ಪಕ್ಷಭೆದ ಮರೆತು ಕರ್ನಾಟಕದ ಒಳಿತಿಗಾಗಿ ನಿಲ್ಲುವ ಪ್ರಯತ್ನ ಮಾಡುತ್ತಿದ್ದೇವೆ.ರಾಜ್ಯದ ಯೋಜನೆಗಳನ್ನು ಸಂಸತ್ ಸದಸ್ಯರ ಗಮನಕ್ಕೆ ತರಲಾಗಿದೆ ಎಂದರು.

ಕೇಂದ್ರದ ಮೇಲೆ ಒತ್ತಡ ಹಾಕಿ ಮಂಜೂರು ಮಾಡಿಸಲು ಹೇಳಿದ್ದೇವೆ. ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷಭೇದ ಮರೆತು ಪ್ರಯತ್ನ ಮಾಡುತ್ತಿದ್ದೇವೆ. ಕೇಂದ್ರ ಮಂತ್ರಿಗಳು ಉತ್ತರದ ರೂಪದಲ್ಲಿ ಪತ್ರ ಕೊಟ್ಟಿದ್ದಾರೆ. ಬಿಜೆಪಿ ತನ್ನ ನಿಲುವುಗಳನ್ನ ಪ್ರಸ್ತಾಪಿಸಿದ್ದಾರೆ. ಅದರಲ್ಲಿ ಅನೇಕ ಸುಳ್ಳುಗಳಿವೆ ಎಂದರು.