ಇಂದು, ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ

Spread the love

ಬೆಂಗಳೂರು: ಇಂದು ಅಥಾವ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಅಂಥ ಅವರು ಇದೇ ವೇಳೆ ಹೇಳಿದರು. ಇನ್ನೂ ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಜರಿಗೆ ಹಾಕಲಾಗಿದೆ ಎಂದು ತಿಳಿಸಿದರು.

ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ರಾಜ್ಯದ 1 ಕೋಟಿಗಿಂತ ಹೆಚ್ಚು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.