
ನವದೆಹಲಿ : ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 169 ರನ್ ಗಳಿಸಲಷ್ಟೇ ಶಕ್ತವಾಯಿತು.
ವಿಶ್ವ ಕ್ರಿಕೆಟ್ಗೆ ಭಾರತವೇ ಸಾಮ್ರಾಟ; 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

ಬರೋಬ್ಬರಿ 11 ವರ್ಷಗಳ ನಂತರ 140 ಕೋಟಿ ಭಾರತೀಯರ ಕನಸು ನನಸಾಗಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ.
ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಅಜೇಯ ತಂಡವಾಗಿ ಫೈನಲ್ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.
ಟಿ20 ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ‘ವಿರಾಟ್ ಕೊಹ್ಲಿ’

ಬಾರ್ಬಡೋಸ್ನಲ್ಲಿ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ಗಳ ಜಯ ಸಾಧಿಸಿದ ನಂತರ 2024 ರ ಆವೃತ್ತಿಯ ಟಿ 20 ವಿಶ್ವಕಪ್ ಆಟಗಾರನಾಗಿ ತನ್ನ ಕೊನೆಯ ಆವೃತ್ತಿಯಾಗಿದೆ ಎಂದು ಭಾರತದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಘೋಷಿಸಿದರು. ಈ ಮೂಲಕ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ.
ಭಾರತದ ಗೆಲುವಿನಲ್ಲಿ 76 ರನ್ ಗಳಿಸಿದ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ವಲ್ಪ ಸಮಯದ ನಂತರ ಈ ವಿಷಯವನ್ನು ಬಹಿರಂಗಪಡಿಸಿದರು.