ದೇವೇಗೌಡರ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

Spread the love

ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕೆಲಕಾಲ ಜೆಡಿಎಸ್​ ವರಿಷ್ಠರ ಜತೆ ಮಾತುಕತೆ ನಡೆಸಿದರು.

ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ದೇವೇಗೌಡರ ಜತೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಶುಭ ಕೋರಿದರು.

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಿದರು. ಜನತಾ ಪರಿವಾರದ ಹಳೆಯ ನೆನಪುಗಳನ್ನೂ ಮೆಲುಕು ಹಾಕಿದರು. ಮಾಜಿ ಸಚಿವರಾದ ವಿ.ಸೋಮಣ್ಣ, ಎಚ್.ಡಿ. ರೇವಣ್ಣ ಉಪಸ್ಥಿತರಿದ್ದರು.