ರಭಸದ ಮಳೆ : ಮುಂಡಗೋಡ ಸೇರಿ ಉತ್ತರಕನ್ನಡದಲ್ಲಿ ಶಾಲೆ, ಕಾಲೇಜುಗಳಿಗೆ ನಾಳೆ ದಿ.19ರಂದು ರಜೆ ಘೋಷಣೆ

Spread the love

ಮುಂಡಗೋಡ : ಜಿಲ್ಲಾದ್ಯಂತ ರಭಸದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಿ.19ರಂದು ಉತ್ತರಕನ್ನಡ ಜಿಲ್ಲೆಯ ಕುಮಟಾ, ಕಾರವಾರ, ಅಂಕೋಲ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪ.ಪೂ.ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.