ಭದ್ರಾಪುರದಲ್ಲಿ ಮಳೆ, ಗಾಳಿಯಿಂದ ಮನೆ ಮೇಲೆ ಬಿದ್ದ ಮರ : ಇಬ್ಬರಿಗೆ ಗಾಯ

Spread the love

ಮುಂಡಗೋಡ : ಧಾರಾಕಾರ ಮಳೆ, ಗಾಳಿಯಿಂದಾಗಿ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ಮನೆಯ ಮೇಲೆ ಮರ ಬಿದ್ದು ಇಬ್ಬರಿಗೆ ಸಣ್ಣಪುಟ್ಟ ಗಾಯವಾದರೆ ಮನೆಗೆ ತೀವ್ರ ಹಾನಿಯಾದ ಘಟನೆ ನಡೆದಿದೆ. 

ಧಾರಾಕಾರ ಮಳೆ ಮತ್ತು ಗಾಳಿಯಿಂದ ಭದ್ರಾಪುರದ ಹೊಸನಗರದಲ್ಲಿ ರಜಿಯಾ ಬೇಗಂ ಕಾಸಿಂಸಾಬ್ ಶೇಖ ಎಂಬುವರ ಮನೆ ಮೇಲೆ, ಮನೆ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಮರ ಬಿದ್ದಿದೆ. ಮನೆ ಮೇಲೆ ಬಿದ್ದು ಹಾನಿಯಾಗಿದೆ. ಮನೆಯಲ್ಲಿದ್ದ ರಜಿಯಾ ಬೇಗಂ ಮತ್ತು ಮಗನಿಗೆ ಸಣ್ಣಪುಟ್ಟ ಗಾಯವಾಗಿದೆ.
ಘಟನೆ ನಡೆದ ಬಳಿಕ ತಡರಾತ್ರಿ ಮನೆಯಲ್ಲಿದ್ದ ಎಲ್ಲರನ್ನೂ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ ಎಂದು ಹೇಳಲಾಗಿದೆ.