ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ

Spread the love

ಕಾರವಾರ : ಭಾರೀ ಮಳೆಯಿಂದಾಗಿ ಶಿರೂರ ಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಈ ಪೈಕಿ  ಕಾರ್ಯಾಚರಣೆ ಮೂಲಕ ಈವರೆಗೆ ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನು ಈ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಈಗ ಗುಡ್ಡದ ಮುಂಭಾಗದಲ್ಲಿರುವ ಗಂಗಾವಳಿಯಲ್ಲಿರುವುದು ಪತ್ತೆಯಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ದುರಂತ ಸಂಭವಿಸಿದ ಎಂಟು ದಿನಗಳು ಕಳೆದ ಬಳಿಕ ಟ್ರಕ್ ಪತ್ತೆಯಾಗಿದ್ದು, ಕಾರ್ಯಚರಣೆ ತೀವ್ರಗೊಂಡಿದೆ. ಆದ್ರೆ, ಚಾಲಕ ಅರ್ಜುನ್ ಟ್ರಕ್ನಲ್ಲಿ ಸಿಲುಕಿಕೊಂಡಿದ್ದಾರಾ ಅಥವಾ ನದಿಯಲ್ಲಿ ಕೊಚ್ಚಿ ಹೋಗಿದ್ದಾರಾ ಎನ್ನುವುದು ಇನ್ನು ತಿಳಿದುಬಂದಿಲ್ಲ. ಸದ್ಯಕ್ಕೆ ನದಿಯಿಂದ ಟ್ರಕ್ ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.