
ಮುಂಡಗೋಡ : ತಾಲೂಕಿನ ಮಳಗಿ ಸಮೀಪದ ಧರ್ಮ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮಳಗಿ-ದಾಸನಕೊಪ್ಪ ರಸ್ತೆ ಜಲಾವೃತವಾಗಿದೆ.

ಮಿನಿ ಸೇತುವೆ ಮೇಲೆ ನೀರು ಹರಿಯುತ್ತಿರುವ ಕಾರಣ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಧರ್ಮ ಜಲಾಶಯಕ್ಕೆ ನೀರು ಹರಿದು ಬರುತ್ತಿವೆ. ಮಳಗಿ-ದಾಸನಕೊಪ್ಪ ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
