ʻಗ್ಯಾರಂಟಿ ಸಮಿತಿ ಪದಾಧಿಕಾರಿʼಗಳಿಗೆ ವೇತನ, ಭತ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ರಚಿಸಲಾದ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಿತಿಗಳ ಪದಾಧಿಕಾರಿಗಳಿಗೆ ಗೌರವಧನ ಮತ್ತು ಭತ್ಯೆ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಆದೇಶದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ “ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಬಿಬಿಎಂಪಿ ಮಟ್ಟದಲ್ಲಿ ಬಿ.ಬಿ.ಎಂ.ಪಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಿ, ಸದರಿ ಪ್ರಾಧಿಕಾರ ಮತ್ತು ಸಮಿತಿಗಳ ಕರ್ತವ್ಯ ಮತ್ತು ಜವಾಬ್ದಾರಿ ನಿರ್ವಹಣೆ ಬಗ್ಗೆ ನಿರ್ದೇಶನಗಳನ್ನು ನೀಡಿ ಆದೇಶಿಸಿದೆ.