ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ: ಸಿಎಂ ಸಿದ್ಧರಾಮಯ್ಯ ಕಿಡಿ

Spread the love

ಮಂಡ್ಯ : ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು ತೆಗೆಯುತ್ತಲೇ ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ವಿವಾದ ಸರ್ವೋಚ್ಛ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದು ಸಾಧಾರಣ ವರ್ಷದಲ್ಲಿ ಜಲಾಶಯಗಳು ತುಂಬಿದ ಸಂದರ್ಭದಲ್ಲಿ 177.25 ಟಿಎಂಸಿ ನೀರನ್ನು ಕೊಡಬೇಕೆಂದಿದೆ. 2022-2023ರಲ್ಲಿ ಸುಮಾರು 665 ಟಿಎಂಸಿ ನೀರು ಹರಿದಿದೆ. ಈ ವರ್ಷವೂ ಕೂಡ ಹೆಚ್ಚು ಹೋಗುವ ಸಾಧ್ಯತೆಯಿದೆ. ಈಗಾಗಲೇ 83. ಟಿಎಂಸಿ ಗೂ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗಿದೆ. ಸಂಕಷ್ಟದ ವರ್ಷದಲ್ಲಿ ಅಷ್ಟು ನೀರನ್ನು ಕೊಡಲು ಸಾಧ್ಯವಿಲ್ಲ. ಈ ವರ್ಷ ಹೆಚ್ಚು ನೀರನ್ನು ಕೊಡಲಾಗುವುದು. ಸಮುದ್ರಕ್ಕೆ ಸೇರುವ ಹೆಚ್ಚುವರಿ ನೀರನ್ನು ತಡೆಹಿಡಿಯಲು ಬ್ಯಾಲೆಂನ್ಸಿಂಗ್ ರಿಸರ್ವಾಯರ್ ಕಟ್ಟಿದರೆ ನಮಗಿಂತ ಜಾಸ್ತಿ ತಮಿಳುನಾಡಿಗೆ ಅನುಕೂಲವಾಗುತ್ತದೆ ಎಂದರು.