
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನು ಎಫ್ ಎಸ್ ಎಲ್ ವರದಿಯಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋಗಳು ಅಸಲಿ ಎಂದು ವರದಿ ಬಹಿರಂಗಪಡಿಸಿದೆ.
ಇದೇ ಒಂದು ವರದಿಯನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು, ಶೀಘ್ರವೇ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಹಿರಿಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಎಸ್ಐಟಿ ಇದೀಗ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಎರಡು ವಾರದೊಳಗೆ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ ಎನ್ನಲಾಗುತ್ತಿದೆ. ಸಾಕ್ಷವನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಿದೆ.
ವೈರಲ್ ಆದ ವಿಡಿಯೋ ಮಾರ್ಪ ಅಲ್ಲ ಎಂದು ಈಗಾಗಲೇ ವರದಿ ಬಂದಿದ್ದು ಈ ಕುರಿತು ಎಫ್ಎಸ್ಎಲ್ ನಿಂದ ಬಂದಂತಹ ವರದಿಯನ್ನು ಆಧರಿಸಿ ಚಾರ್ಜ್ ಶೀಟ್ ಸಲ್ಲಿಸುವುದಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಇದೀಗ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.