
ನವದೆಹಲಿ : ಹೊಸ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರಲ್ಲಿ ಇಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಸಲ್ಲಿಸಿದರು.

ದೆಹಲಿಯಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣರವರನ್ನು ಭೇಟಿ ಮಾಡಿ ಸುಧೀರ್ಘವಾಗಿ ಚರ್ಚಿಸಿ ನಮ್ಮ ಕ್ಷೇತ್ರದಲ್ಲಿ ಹೊಸ ರೈಲ್ವೆ ಯೋಜನೆಗಳಾದ (1) ಹುಬ್ಬಳ್ಳಿ-ಅಂಕೋಲಾ,
(2) ತಾಳಗುಪ್ಪ- ಶಿರಸಿ – ಹುಬ್ಬಳ್ಳಿ, (3) ತಾಳಗುಪ್ಪ- ಹೊನ್ನಾವರ, (4) ಬೆಳಗಾವಿ -ಕಿತ್ತೂರು- ಹುಬ್ಬಳ್ಳಿ,
ಈ ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕೆಂದು ಮತ್ತು ಕೆಲವು ಹೊಸ ರೈಲ್ವೆಗಳಾದ, (1) ವಾಸ್ಕೋ- ಬೆಳಗಾವಿ- ಮೀರಜ್ ಪ್ಯಾಸೆಂಜರ್, (2) ಕ್ಯಾಸಲ್ ರಾಕ್- ಮೀರಜ್- ಕ್ಯಾಸಲ್ ರಾಕ್ ಇವುಗಳನ್ನು ಪ್ರಾರಂಭ ಮಾಡಲು ವಿನಂತಿಸಿದರು.
ಇವುಗಳ ಜೊತೆಗೆ ಇತರ ಬೇಡಿಕೆಗಳಾದ ಕುಮಟಾ ಮತ್ತು ಗೋಕರ್ಣ ರೈಲ್ವೆ ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರ್ಮ್ ನಿರ್ಮಾಣ, ಕೊಂಕಣ ರೈಲ್ವೆಯಲ್ಲಿ ಸಂಚರಿಸುವ ರೈಲುಗಳಲ್ಲಿ ನಮ್ಮ ಜಿಲ್ಲೆಯ ಪ್ರಯಾಣಿಕರಿಗೆ ಹೆಚ್ಚಿನ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಕಲ್ಪಿಸುವಿಕೆ, ಕೆಲವು ಸ್ಥಳಗಳಲ್ಲಿ ಮೇಲ್ಸೇತುವೆ ಮತ್ತು ಅಂಡರ್ ಪಾಸ್‌ಗಳನ್ನು ನಿರ್ಮಿಸುವಂತೆ ಸಂಸದರು ಸಚಿವರಲ್ಲಿ ಮನವಿ ಮಾಡಿದರು.
ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ವಿಶೇಷ ಸಹಕಾರ ನೀಡುವುದಾಗಿ ಭರವಸೆಯಿತ್ತರು.