ನಾಳೆಯಿಂದ ರಾಜ್ಯಾದ್ಯಂತ ಆ.6ರವರೆಗೆ ಭಾರೀ ಮಳೆ: ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Spread the love

ಬೆಂಗಳೂರು : ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮತ್ತೆ ಆಗಸ್ಟ್.6ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.

ಈ ಬಗ್ಗೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್.6ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಿರುವಂತ ಹವಾಮಾನ ಇಲಾಖೆಯು, ಬೆಳಗಾವಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಉದ್ದಕ್ಕೂ ಬಿರುಗಾಳಿಯ ಹವಾಮಾನವಿರಲಿದೆ. ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಆಗಸ್ಟ್.6ರವರೆಗೂ ಭಾರಿ ಮಳೆ ಮುಂದುವರಿಯಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.