ವಯನಾಡು ದುರಂತ: ರಾಜ್ಯ ಸರ್ಕಾರದಿಂದ 100 ಮನೆ ನಿರ್ಮಾಣಕ್ಕೆ ನೆರವು: ಸಿಎಂ ಸಿದ್ಧರಾಮಯ್ಯ ಘೋಷಣೆ

Spread the love

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದಂತ ಭೀಕರ ಭೂ ಕುಸಿತದಿಂದ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಷ್ಟೇ ಜನರು ನಾಪತ್ತೆಯಾಗಿದ್ದಾರೆ. ಭೂ ಕುಸಿತದಿಂದ ತತ್ತರಿಸಿರುವಂತ ಕೇರಳ ರಾಜ್ಯಕ್ಕೆ ಕರ್ನಾಟಕ ಸರ್ಕಾರ ನೆರವಿನ ಹಸ್ತ ಚಾಚಿದೆ. 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಅಂತ ಹೇಳಿದ್ದಾರೆ.