
ಮುಂಡಗೋಡ : ನಾವು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸುವುದರ ಜೊತೆಗೆ ದೇಶಪ್ರೇಮವನ್ನು ಕಲಿಸಬೇಕೆಂದು ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಶಿಕ್ಷಕರಿಗೆ ಕರೆ ನೀಡಿದರು.

ಶನಿವಾರ ಅವರು ಭಾರತ ಸೇವಾದಳದ ಶಿಕ್ಷಕ, ಶಿಕ್ಷಕಿಯರ ಪುನಶ್ಚೇತನ ಶಿಬಿರನ್ನು ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸಕರಾಗಿ ಆಗಮಿಸಿದ ಕೆ.ಎನ್.ಹೊಸಮನಿ ಮಾತನಾಡುತ್ತಾ, ಶ್ರದ್ಧೆ, ಭಕ್ತಿಯಿಂದ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಭಾರತ ಸೇವಾದಳದ ತಾಲೂಕ ಘಟಕದ ಅಧ್ಯಕ್ಷರಾದ ರಾಮಕೃಷ್ಣ ಮೂಲಿಮನಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಲ್.ಟಿ.ಪಾಟೀಲ್, ಬಿಇಒ ಜಕಣಾಚಾರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಜಿ.ಎನ್.ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕ ವಿಜಯಕುಮಾರ್ ಶೆಟ್ಟಿ, ಮುಖಂಡರಾದ ಜ್ಞಾನೇಶ್ವರ ಗುಡಿಯಾಳ, ಭಾರತ ಸೇವಾದಳದ ಜಿಲ್ಲಾ ಸಂಘಟಕ ರಾಮಚಂದ್ರ ಹೆಗಡೆ, ತಾಲೂಕಾ ಸಂಘಟಕ ಎನ್.ಎಸ್.ಹೆಗಡೆ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ದಯಾನಂದ ನಾಯ್ಕ, ಪ್ರದೀಪ್ ಕುಲಕರ್ಣಿ, ಮಂಜುನಾಥ ಕಲಾಲ, ವಿನಾಯಕ ಶೇಟ, ಸಿ.ಕೆ.ಅಶೋಕ, ಶ್ರೀಧರ ಹೆಗಡೆ ಮುಂತಾದವರಿದ್ದರು.
ಆರಂಭದಲ್ಲಿ ಶಿಕ್ಷಕ ಕೆ.ಕೆ.ಕರುವಿನಕೊಪ್ಪ ಸ್ವಾಗತಿಸಿದರು. ರಾಜೇಂದ್ರ ಗಾಣಿಗ ಕಾರ್ಯಕ್ರಮ ನಿರೂಪಿಸಿದರು.