ಬಸವಣ್ಣನ ಹೊಂಡದಲ್ಲಿ ವ್ಯಕ್ತಿ ಶವ ಪತ್ತೆ

Spread the love

ಮುಂಡಗೋಡ : ಪಟ್ಟಣದ ಬಸವನ ಹೊಂಡದಲ್ಲಿ ವ್ಯಕ್ತಿಯೋರ್ವನ ಶವ ದೊರೆತಿದೆ.
ಬೆಳಿಗ್ಗೆ ಹೊಂಡದಲ್ಲಿ ಶವ ತೇಲುತ್ತಿರುವುದನ್ನು ಕಂಡ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪಿಎಸ್‌ಐ ಪರಶುರಾಮ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ.

ಈ ಮೃತದೇಹ ಮುಂಡಗೋಡ ಪಟ್ಟಣದ ಕಂಬಾರಗಟ್ಟಿಯ ಶಿವಾಜಿ ಬಿಸೆಟ್ಟಿ (60) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.