ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್: ಹೋಟೆಲ್ ನಲ್ಲಿ ತಂಗಿದ್ದ 9 ಭಕ್ತರಿಗೆ ಗಂಭೀರ ಗಾಯ

Spread the love

ಬೆಳಗಾವಿ: ಜಿಲ್ಲೆಯ ಸವದತ್ತಿಯ ಯಲ್ಲಮ್ಮ ದೇವರಿಗೆ ತೆರಳಿದ್ದಂತ ವೇಳೆಯಲ್ಲಿ ಹೋಟೆಲ್ ನಲ್ಲಿ ತಂಗಿದ್ದ ಸಂದರ್ಭದಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ 9 ಭಕ್ತಾಧಿಗಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೋಟೆಲ್ ಒಂದರಲ್ಲಿ ಎಲ್ಲಮ್ಮ ದೇವಸ್ಥಾನಕ್ಕೆ ಯಾದಗಿರಿ ಹಾಗೂ ಬೆಂಗಳೂರಿನಿಂದ ತೆರಳಿದ್ದಂತ ಭಕ್ತರು ಹೋಟೆಲ್ ಒಂದರಲ್ಲಿ ತಂಗಿದ್ದರು. 

ಸವದತ್ತಿ ಪಟ್ಟಣದ ಹೋಟೆಲ್ ನಲ್ಲಿ ತಂಗಿದ್ದಂತ ಸಂದರ್ಭದಲ್ಲಿ ಹೋಟೆಲ್ ನಲ್ಲಿಯೇ ಕುಕ್ಕರ್ ಇರಿಸಿ, ಹೋಳಿಗೆ ಮಾಡೋದಕ್ಕೆ ಬೇಯಿಸಲು ಇಟ್ಟಿದ್ದರು. ಈ ಸಂದರ್ಭದಲ್ಲಿ ಕುಕ್ಕರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಇದರ ಪರಿಣಾಮ ಹೋಟೆಲ್ ರೂಮಿನಲ್ಲಿದ್ದಂತ ಯಾದಗಿರಿ ಹಾಗೂ ಬೆಂಗಳೂರಿನ ಮೂಲದ ಭಕ್ತರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಸವದತ್ತಿ ಪಟ್ಟಣದಲ್ಲಿ ಕುಕ್ಕರ್ ಬ್ಲಾಸ್ಟ್ ನಿಂದ ಗಾಯಗೊಂಡಿದ್ದಂತ ಗಾಯಾಳು ಭಕ್ತರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.