ಮುಂಡಗೋಡ : ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ತಾಲೂಕಾ ಬಿಜೆಪಿ ಮಂಡಲ ಹಾಗೂ ಯುವ ಮೋರ್ಚಾ ವತಿಯಿಂದ ಮಂಗಳವಾರ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಹರ್ ಘರ್ ತಿರಂಗಾ ಸಂಚಾಲಕರು ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಗುರುಪ್ರಸಾದ ಹೆಗಡೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಎಲ್.ಟಿ.ಪಾಟೀಲ ಮತ್ತು ಅಶೋಕ ಚಲವಾದಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಪ್ರೇಮಕುಮಾರ ನಾಯ್ಕ ಚಾಲನೆ ನೀಡಿದರು.
ಇದಕ್ಕೂ ಮುನ್ನ ಪಟ್ಟಣದ ಅಂಬೇಡ್ಕರ್ ಓಣಿಯ ಕ್ರಾಸ್ ಹತ್ತಿರ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಗಳನ್ನು ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಮಂಜುನಾಥ ಪಾಟೀಲ, ಅಭಿಯಾನದ ಸಂಚಾಲಕ ಮಂಡಲ ಪ್ರಧಾನ ಕಾರ್ಯದರ್ಶಿ ವಿಠ್ಠಲ ಬಾಳoಬೀಡ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಬಿಜೆಪಿಯ ಮುಖಂಡರಾದ ರವಿ ಹಾವೇರಿ, ಹಿಂದೂ ಜಾಗರಣಾ ವೇದಿಕೆಯ ಪ್ರಕಾಶ ಬಡಿಗೇರ, ವಿಶ್ವನಾಥ ನಾಯರ, ಮುಖಂಡರಾದ ಮಂಜುನಾಥ ಹರಮಲ್ಕರ, ಮಂಜುನಾಥ ಎಚ್, ಶಂಕರ ಲಮಾಣಿ, ಪ್ರಕಾಶ್ ದೇವರಮನಿ, ಪರಮೇಶ ಧಾರವಾಡ ಸೇರಿದಂತೆ ಮುಂತಾದವರಿದ್ದರು.