ಕರ್ನಾಟಕದಲ್ಲಿ ಕೊರೊನಾ ಏರಿಕೆ; ಮತ್ತೆ ರಾತ್ರಿ, ವೀಕೆಂಡ್ ಕರ್ಫ್ಯೂ ಜಾರಿಗೆ ಸಲಹೆ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ಕರ್ನಾಟಕ ತಾಂತ್ರಿಕ ಸಲಹಾ ಸಮಿತಿ, ಕೊರೊನಾ ನಿಯಂತ್ರಣಕ್ಕೆ ಕೆಲವೊಂದು ಸಲಹೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಕರ್ನಾಟಕದಲ್ಲಿಯೂ ಕೆಲವು ದಿನಗಳಿಂದ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ಹೀಗಾಗಿ ಕೆಲವು ಕೊರೊನಾ ನಿಯಮಗಳನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಕುರಿತು ಚರ್ಚೆಗಳು ನಡೆಯುತ್ತಿವೆ.

ಸದ್ಯಕ್ಕೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕೈಮೀರಿ ಹೋಗುವ ಮುನ್ನ ಕೊರೊನಾ ನಿಯಂತ್ರಣಕ್ಕೆ ಮತ್ತೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಹೇರುವಂತೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿರುವುದರಿಂದ ಈಗಲೇ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ. ಹೀಗಾಗಿ ಎಲ್ಲೆಡೆ ರಾತ್ರಿ ಕರ್ಫ್ಯೂ ಮತ್ತೆ ಜಾರಿಗೊಳಿಸಬೇಕು. ಪ್ರತಿ ದಿನ ಸಂಜೆ ಏಳರಿಂದ ಬೆಳಿಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಹೇರಿದರೆ ಸೂಕ್ತ ಎಂದು ಸಲಹೆ ನೀಡಲಾಗಿದೆ.