ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಟಿ ಅಧಿಕಾರಿಗಳು ಇಂದು ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಇಂದು ಶಿವಮೊಗ್ಗದ ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ಚಂದ್ರಶೇಖರ್ ಅಧಿಕಾರಿಗಳು ಹಾಗೂ ಪದ್ಮನಾಭ ಹಾಗೂ ಪರಶುರಾಮ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ವಿನೋಬಾನಗರ ಪೊಲೀಸ್ ಠಾಣೆಯಲ್ಲಿ ವಾಲ್ಮೀಕಿ ಚಂದ್ರಶೇಖರ್ ಪತ್ನಿ ನೀಡಿದ ದೂರಿನ್ವಯ ತನಿಖೆ ನಡೆಸಿದ ಸಿಐಡಿ ತಂಡ ಚಾರ್ಜ್ ಶೀಟ್ ಸಲ್ಲಿಸಿದೆ.
ಘಟನೆ ಹಿನ್ನೆಲೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಮೇ 26 ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಶಿವಮೊಗ್ಗ ವಿನೋಬನಗರ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಬಳಿಕ ಇದೇ ಕಾರಣದಿಂದ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರು.