ಮಾಜಿ ಸಿಎಂ `BSY’ ವಿರುದ್ಧ ಪೋಕ್ಸೋ ಪ್ರಕರಣ : ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ!

Spread the love

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ತಡೆ ನೀಡಿರುವ ಆದೇಶವನ್ನು ತೆರವು ಕೋರಿ ಸಿಐಡಿ ಎಸ್ ಪಿಪಿ ಅಶೋಕ್ ನಾಯ್ಕ್ ಅರ್ಜಿ ಸಲ್ಲಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಯಡಿಯೂರಪ್ಪರನ್ನು ಬಂಧಿಸಿದಂತೆ ನೀಡಿದ್ದ ಆದೇಶವನ್ನು ತೆರವು ಕೋರಿ ಸಿಐಡಿ ಎಸ್ ಪಿಪಿ ಅಶೋಕ್ ನಾಯ್ಕ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮಧ್ಯಂತರ ರಕ್ಷಣೆಗೆ ನೀಡಿತ್ತು. ಇದೀಗ ಅಶೋಕ್ ನಾಯ್ಕ್ ಅವರು ಮಧ್ಯಂತರ ತಡೆ ಆದೇಶವನ್ನು ತೆರವು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ 2.30 ಕ್ಕೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಪ್ರಕರಣದ ಹಿನ್ನೆಲೆ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.