ಬೆಳಗಾವಿಯ ಹಿಂಡಲಗಾ ಜೈಲಿಗೆ ನಟ ದರ್ಶನ್ ಶಿಫ್ಟ್?

Spread the love

ಬೆಳಗಾವಿ : ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ (Parappana Agrahara) ನಟ ದರ್ಶನ್ ಅವರನ್ನು ಸಿಎಂ ಸಿದ್ದರಾಮಯ್ಯ ಬೇರೆ ಜೈಲಿಗೆ ಕಳುಹಿಸಲು ಸೂಚನೆ ನೀಡಿದ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಜೈಲಿಗೆ ದರ್ಶನ್ ಸ್ಥಳಾಂತರವಾಗುವ ಸಾಧ್ಯತೆಯಿದೆ.  

ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಪ್ರಮುಖ ಜೈಲುಗಳ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಮತ್ತು ದರ್ಶನ್ ಅಥವಾ ಆತನ ಗ್ಯಾಂಗ್ ಶಿಫ್ಟ್ ಮಾಡಿದರೆ ಆಗುವ ಸಾಧಕ ಬಾಧಕಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಇದರಿಂದಾಗಿ ಆರೋಪಿ ನಟ ದರ್ಶನ್ ಅಥವಾ ಆತನ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.