Headlines

ಹೈಕಮಾಂಡ್ ಒಪ್ಪಿದರೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ : ದೇಶಪಾಂಡೆ

Spread the love

ಮೈಸೂರು: ಹೈಕಮಾಂಡ್ ಒಪ್ಪಿದರೆ ಹಾಗೂ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಆದರೆ, ಈಗ ಆ ಸ್ಥಾನದ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆ‌ರ್.ವಿ. ದೇಶಪಾಂಡೆ ಹೇಳಿದರು. 

ಪತ್ರಕರ್ತರೊಂದಿಗೆ ರವಿವಾರ ಮಾತನಾಡಿದ ಅವರು, ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ದೊಡ್ಡವನು. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕಷ್ಟೆ. ಎಲ್ಲರಂತೆಯೇ ನನಗೂ ಆಸೆ ಇದೆ. ಜೀವನದಲ್ಲಿ ಮಹತ್ವಾಕಾಂಕ್ಷೆ ಇರಬೇಕು ಎಂದರು. 

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಗೊತ್ತಿಲ್ಲದೆ ಅಂಥ ಯಾವ ಚರ್ಚೆಯೂ ನಡೆಯಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವಧಿ ಪೂರೈಸುತ್ತಾರೆ ಎಂದು ಅವರು ಪ್ರತಿಕ್ರಿಯಿಸಿದರು.
ಮುಡಾ ವಿಚಾರದಲ್ಲಿ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ ಎಂದು ಸಮರ್ಥಿಸಿಕೊಂಡ ಅವರು, ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎನ್ನುತ್ತಿರುವವರು, ಆರೋಪದ ಬಗ್ಗೆ ದಾಖಲೆ ಕೊಟ್ಟರೆ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು.