Headlines

ಬೆಳಗಾವಿ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಪಟಾಕಿ ಸಿಡಿಸುವ ವಿಚಾರಕ್ಕೆ ಯುವಕರ ನಡುವೆ ಗಲಾಟೆ!

Spread the love

ಬೆಳಗಾವಿ : ಇಂದು ರಾಜ್ಯಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗಿತ್ತಿದ್ದೂ, ಎಲ್ಲ ಕಡೆಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.ಆದರೆ ಬೆಳಗಾವಿಯಲ್ಲಿ 2 ಗಣೇಶ ಮಂಡಳಿ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

ಕರೋಶಿ ಗ್ರಾಮದಲ್ಲಿ ಎರಡು ಯುವಕರ ಮಧ್ಯ ಗಲಾಟೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗ್ರಾಮದಲ್ಲಿ ಘಟನೆ ನಡೆದಿದೆ. ಒಂದು ಕಡೆ ಗಣೇಶ ಮಂಡಳಿ ಯುವಕರು ಮೆರವಣಿಗೆಯಲ್ಲಿ ಗಣೇಶ ಮೂರ್ತಿ ತೆಗೆದುಕೊಂಡು ಹೋಗುತ್ತಿದ್ದಾಗ ಗಲಾಟೆ ನಡೆದಿದೆ.ಇನ್ನೊಂದು ಬದಿಯಲ್ಲಿ ಮತ್ತೊಂದು ಗಣೇಶ ಮಂಡಳಿ ಯುವಕರು ಗಣೇಶ ಮೂರ್ತಿ ಮೆರವಣಿಗೆ ಮಾಡುತ್ತ ಗ್ರಾಮದ ಬಸ್ ನಿಲ್ದಾಣದ ಬಳಿ ಬಂದಿದ್ದಾರೆ.

ಈ ವೇಳೆ ಪಟಾಕಿ ಹೊಡೆಯುವ ವಿಚಾರಕ್ಕೆ ವಾದ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಯುವಕರು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಗ್ರಾಮದ ಮುಖಂಡರು ಹುಡುಗರ ಗಲಾಟೆ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ ಘಟನೆ ಕುರಿತಂತೆ ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.