ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಹೀಗಾಗಿ ಇನ್ಮುಂದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 10 ಕೋಟಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ಫಿಕ್ಸ್ ಆದಂತೆ ಆಗಿದೆ.
ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 ಕೋಟಿ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ – 2023ಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ.