ಬೆಂಗಳೂರು: ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಮತ್ತು ಸಮಾಜಸೇವಕ ಕೆ.ಎಸ್ ರಾಜಣ್ಣನವರಿಗೆ ಬೆಂಗಳೂರು ವಿಶ್ವವಿದ್ಯಾಲಯವು (Bengaluru University) ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
59ನೇ ವಾರ್ಷಿಕ ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, 26,210 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. 21,853 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದುಕೊಂಡಿದ್ದು, 5,861 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1,289 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡು ತೇರ್ಗಡೆ ಹೊಂದಿದ್ದಾರೆ. ಒಟ್ಟು 308 ಚಿನ್ನದ ಪದಕಗಳನ್ನು (Gold Medal) ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಿದರು.